Monday, July 7, 2025

ಬೆಳ್ತಂಗಡಿ: ವಾಲಿಬಾಲ್ ತರಬೇತುದಾರನಿಂದ ಕಿರುಕುಳ – ಪೊಲೀಸರಿಗೆ ಒಪ್ಪಿಸಿದ ಹಿಂದೂ ಕಾರ್ಯಕರ್ತರು.! ಆರೋಪಿಯ ಮೊಬೈಲ್‌ನಲ್ಲಿ ಫೋಟೊ, ವಿಡಿಯೋಗಳು ಪತ್ತೆ?

ಬೆಳ್ತಂಗಡಿ: ಯುವತಿಗೆ ವಾಲಿಬಾಲ್‌ ತರಬೇತಿದಾರನೊಬ್ಬ ಮೆಸೇಜ್ ಕಳುಹಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಷ್ಟಲ್ಲದೆ ಆರೋಪಿ‌ ಕೊಟ್ಟ ದೂರಿನ ಮೇಲೂ ಪ್ರಕರಣ ದಾಖಲಾಗಿದೆ.

ಕಾರ್ಕಳ ನಿವಾಸಿ ಸೈಯ್ಯದ್ (24) ಬಂಧಿತ ಆರೋಪಿ. ಈತ ಬೆಳ್ತಂಗಡಿಯ ಖಾಸಗಿ ಕಾಲೇಜಿನ ಅಪ್ರಾಪ್ತ ವಿದ್ಯಾರ್ಥಿನಿಗೆ ಕೆಲ ದಿನಗಳಿಂದ ನಿರಂತರ ಮೆಸೇಜ್ ಮಾಡುತ್ತಾ ಕಿರುಕುಳ ನೀಡುತ್ತಿದ್ದ ಎಂಬ ಆರೋಪವಿದೆ. ಈ ಬಗ್ಗೆ ಮಾಹಿತಿ ಪಡೆದ ಹಿಂದೂ ಸಂಘಟನೆ ಕಾರ್ಯಕರ್ತರು ಏ.26 ರಂದು ಉಜಿರೆಯಲ್ಲಿ ಆರೋಪಿಯನ್ನು ಪತ್ತೆಹಚ್ಚಿದ್ದಾರೆ. ಈ ವೇಳೆ ಆತನಿಗೆ ಥಳಿಸಿದ್ದಾರೆ ಎಂದು ಆರೋಪಿಸಿ ಆರೋಪಿ ಯುವಕ‌ ಕೂಡ ದೂರು ನೀಡಿದ್ದಾನೆ.‌

ಆರೋಪಿ ಸೈಯ್ಯದ್ ನ ಮೊಬೈಲ್ ಪರಿಶೀಲಿಸಿದಾಗ ಹಲವರು ಯುವತಿಯರ ಹಾಗೂ ಆತನ ಅಶ್ಲೀಲ ಫೋಟೋ, ವಿಡಿಯೋಗಳು ಪತ್ತೆಯಾಗಿದೆ ಎಂದು ವರದಿಯಾಗಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಏ.26 ರಂದು ಆರೋಪಿಯನ್ನು ಬಂಧಿಸಿರುವ ಪೊಲೀಸರು ಮಂಗಳೂರು ಫೋಕ್ಸೋ ನ್ಯಾಯಾಲಯದ ನ್ಯಾಯಾಧೀಶರ ಮನೆಗೆ ರಾತ್ರಿ ಹಾಜರುಪಡಿಸಿದ್ದಾರೆ. ನ್ಯಾಯಾಧೀಶರು ಆರೋಪಿಗೆ ಜಾಮೀನು ಮಂಜೂರು ಮಾಡಿದ್ದಾರೆ.

ಹಲವರ ವಿರುದ್ಧ ಪ್ರಕರಣ ದಾಖಲು
ಆರೋಪಿ ಸೈಯ್ಯದ್ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಹಲವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಉಜಿರೆಯ ಹಿಂದೂ ಸಂಘಟನೆ ಕಾರ್ಯಕರ್ತರು ಏ.26 ರಂದು ಸೈಯ್ಯದ್ ನನ್ನು ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದರು. ಇದೀಗ ಹಲ್ಲೆಗೆ ಒಳಗಾಗಿರುವ ಸೈಯ್ಯದ್ ನೀಡಿದ ದೂರಿನಂತೆ ಪೊಲೀಸರ ಹತ್ತಕ್ಕೂ ಹೆಚ್ಚು ಮಂದಿಯ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

Related Articles

Latest Articles